ವಚನ - 1355     
 
ನೀರ ಕ್ಷೀರದ ಸಂದುಗಳ ಹಂಸೆ ಬಿಚ್ಚಬಲ್ಲುದು, ನೋಡಯ್ಯಾ. ದೇಹದ ಜೀವದ ಸಂದ ನೀವು ಬಿಚ್ಚಬಲ್ಲಿರಲ್ಲದೆ ನಾನೆತ್ತ ಬಲ್ಲೆನಯ್ಯಾ? ನೀವಿಕ್ಕಿದ ತೊಡಕ ಬಿಡಿಸಬಾರದು; ನೀವು ಬಿಡಿಸಿದ ತೊಡಕನಿಕ್ಕಬಾರದು. ಕಪಿಲಸಿದ್ಧಮಲ್ಲಿನಾಥಯ್ಯಾ, ಎನ್ನ ಕಾಯದ ಜೀವದ ಹೊಲಿಗೆಯ ಬಿಡಿಸಾ, ನಿಮ್ಮ ಧರ್ಮ.