ವಚನ - 1386     
 
ಆತನ ಸುಖದುಃಖವೀತಗೇನು? ಈತನ ಸುಖದುಃಖವಾತಗೇನು? ನಿಮ್ಮ ನಿಮ್ಮ ಮನವ ಸಂತೈಸಿಕೊಳ್ಳಿ; ನಿಮ್ಮ ನಿಮ್ಮ ಅರಿವ ಸಂತೈಸಿಕೊಳ್ಳಿ. ರಂಭೆ ಎಂದಡೆ ನಿನ್ನಂಗನೆಯಾಗಲಿಲ್ಲವು; ಒಂದಿನ ಸ್ವಪ್ನದಲ್ಲಾದಡೂ ರತಿಸಲಿಲ್ಲ ನೋಡಾ, ಕಪಿಲಸಿದ್ಧಮಲ್ಲಿಕಾರ್ಜುನಾ.