ವಚನ - 1389     
 
ಬ್ರಹ್ಮನ ಪೂಜಿಸಿ ಸೃಷ್ಟಿಗೊಳಗಾಗುವುದ ಬಲ್ಲೆ. ವಿಷ್ಣುವಿನ ಪೂಜಿಸಿ ಸ್ಥಿತಿಗೊಳಗಾಗುವುದ ಬಲ್ಲೆ. ರುದ್ರನ ಪೂಜಿಸಿ ಲಯಕ್ಕೊಳಗಾಗುವುದ ಬಲ್ಲೆ. ನಮ್ಮಿಷ್ಟಲಿಂಗಮೂರ್ತಿಯ ಪೂಜಿಸಿ ಲಿಂಗವಾಗಿ ಸರ್ವವಳಿವುದ ಬಲ್ಲೆ ನೋಡಯ್ಯಾ, ಕಪಿಲಸಿದ್ಧಮಲ್ಲಿಕಾರ್ಜುನಾ.