ವಚನ - 1397     
 
ಉಪದೇಶವ ಮಾಡಿದಲ್ಲಿ ಗುರುವೆನಿಸಿದನು. ಕಾಮಿತ ಫಲಂಗಳ ಕೊಟ್ಟಲ್ಲಿ ಲಿಂಗಮೂರ್ತಿ ಎನಿಸಿದನು. ನಿತ್ಯನಿರ್ವಾಣದ ಸಕೀಲವ ತೋರಿದಲ್ಲಿ ಜಂಗಮವೆನಿಸಿದನಯ್ಯಾ, ಎಲೆ ಕಪಿಲಸಿದ್ಧಮಲ್ಲಿಕಾರ್ಜುನಾ.