ವಚನ - 1400     
 
ಕೆರೆಯ ನೀರು, ಮರದ ಪುಷ್ಪ ಧರಿಸಿದಡೇನು ಅಯ್ಯಾ, ಆಗುವುದೆ ಆಗುವುದೆ ಲಿಂಗಾರ್ಚನೆ? ನೀರೆರೆಯಲಿಕ್ಕಾತನೇನು ಬಿಸಿಲಿನಿಂದ ಬಳಲಿದನೆ? ಪುಷ್ಪದಿಂದ ಧರಿಸಲಿಕ್ಕಾತನೇನು ವಿಟರಾಜನೆ? ನಿನ್ನ ಮನವೆಂಬ ನೀರಿಂದ, ಜ್ಞಾನವೆಂಬ ಪುಷ್ಪದಿಂದ ಪೂಜಿಸಬಲ್ಲಡೆ ಭಕ್ತನೆಂಬೆ, ಮಹೇಶ್ವರನೆಂಬೆ ನೋಡಾ, ಕಪಿಲಸಿದ್ಧಮಲ್ಲಿಕಾರ್ಜುನಾ.