ವಚನ - 1422     
 
ಎಲೆ ದೇವಾ, ಒಂದು ಹೋಗಿ ಎರಡಾದುದು, ಎರಡು ಹೋಗಿ ಮೂರಾದುದು, ಮೂವತ್ತಾರಾಗಿ ಮೂರರಲ್ಲಿ ಆಡಿದುದು; ಆಡಿ ಆಡಿ ಅದೆ ಲಿಂಗವಾಯಿತ್ತು. ನಮ್ಮ ಗುರು ಚೆನ್ನಬಸವಣ್ಣನೊಂದು ಕೊಟ್ಟಲ್ಲಿ ಎಲ್ಲಾ ಒಂದೆ ಆಯಿತ್ತು, ಕಪಿಲಸಿದ್ಧಮಲ್ಲಿಕಾರ್ಜುನಾ.