ವಚನ - 1430     
 
ಕುಂಬಾರರೆಲ್ಲರು ಗುಂಡಯ್ಯನಾಗಬಲ್ಲರೆ? ಮಡಿವಾಳರೆಲ್ಲರು ಮಾಚಯ್ಯನಾಗಬಲ್ಲರೆ? ಜೀಡರೆಲ್ಲರು ದಾಸಿಮಯ್ಯನಾಗಬಲ್ಲರೆ? ಎನ್ನ ಗುರು ಕಪಿಲಸಿದ್ಧಮಲ್ಲೇಶ್ವರಯ್ಯಾ, ಪ್ರಾಣಿಗಳ ಕೊಂದು ಪರಿಹರಿಸಬಲ್ಲಡೆ ತೆಲುಗ ಜೊಮ್ಮಯ್ಯನಾಗಬಲ್ಲರೆ?