ವಚನ - 1452     
 
ದೇಹ ನಾನೆಂದು ನಂಬಿದೆ, ಎಲೆ ಮನವೆ. ದೇಹದಲ್ಲಿಹ ಗುಣಂಗಳು ನಿನ್ನಲ್ಲಿ ಕಂಡಯ್ಯಾ ಮನವೆ. ಪೃಥ್ವಿಯ ಗುಣ ಶಾಂತಿ, ಉದಕದ ಗುಣ ಸ್ವಾದ, ಅಗ್ನಿಯ ಗುಣ ಸರ್ವಭಕ್ಷಣ, ವಾಯುವಿನ ಗುಣ ನಿರ್ಮಲತ್ವ, ಆಕಾಶದ ಗುಣ ನಿರ್ವಯಲು. ಈ ಪಂಚತತ್ತ್ವದ ಗುಣ ನಿನ್ನಲ್ಲಿರಲು, ನೀನೆ ಪಂಚಮುಖ ನೋಡಾ ಮನವೆ, ಕಪಿಲಸಿದ್ಧಮಲ್ಲಿಕಾರ್ಜುನಾ.