ವಚನ - 1456     
 
ಕಟೆದ ಕಲ್ಲು ಲಿಂಗವೆಂದೆನಿಸಿತ್ತು; ಕಟೆಯದ ಕಲ್ಲು ಕಲ್ಲೆನಿಸಿತ್ತು. ಪೂಜಿಸಿದ ಮಾನವ ಭಕ್ತನೆನಿದನು; ಪೂಜಿಸದ ಮಾನವ ಮಾನವನೆನಿಸಿದನು. ಕಲ್ಲಾದಡೇನು? ಪೂಜೆಗೆ ಫಲವಾಯಿತ್ತು ; ಮಾನವನಾದಡೇನು? ಭಕ್ತಿಗೆ ಕಾರಣಿಕನಾದನು. ಕಲ್ಲು ಲಿಂಗವಲ್ಲ, ಲಿಂಗ ಕಲ್ಲಲ್ಲ ನೋಡಾ, ಕಪಿಲಸಿದ್ಧಮಲ್ಲಿಕಾರ್ಜುನಾ.