Index   ವಚನ - 18    Search  
 
ಜಂಬೂದ್ವೀಪದ ವ್ಯವಹಾರಿ ಖಂಡ ಭಂಡವ ತುಂಬಿ ಕುಂಭಿನಿಯುದರದ ಮೇಲೆ ಪಸರವನಿಕ್ಕಿದ. ಉಷ್ಣ ತೃಷ್ಣೆ ಘನವಾಗಿ, ಕಡಲೇಳು ಸಮುದ್ರವ ಕುಡಿದು ನೀರಡಿಸಿದಾತ ಅರಲುಗೊಂಡು ಬೆರಗಾದ. ಶಿಶು ತಾಯ ಹೆಣನ ಹೊತ್ತುಕೊಂಡು ಹೆಸರ ಹೇಳುತ್ತೈದಾನೆ! ಗುಹೇಶ್ವರನೆಂಬ ಲಿಂಗವ ವಸುಧೆಯಾಕೃತಿ ನುಂಗಿತ್ತು.