Index   ವಚನ - 188    Search  
 
ಗಟ್ಟಿದುಪ್ಪ ತಿಳಿದುಪ್ಪಕ್ಕೆ ಹಂಗುಂಟೆ ಅಯ್ಯಾ? ದೀಪಕ್ಕೆ ದೀಪ್ತಿಗೆ ಭೇದವುಂಟೆ ಅಯ್ಯಾ? ಅಂಗಕ್ಕೆ ಆತ್ಮಂಗೆ ಭಿನ್ನವುಂಟೆ ಅಯ್ಯಾ? ಎನ್ನಂಗವನು ಶ್ರೀಗುರು ಮಂತ್ರವಮಾಡಿ ತೋರಿದನಾಗಿ, ಸಾವಯಕ್ಕೂ ನಿರವಯಕ್ಕೂ ಭಿನ್ನವಿಲ್ಲವಯ್ಯಾ. ಚೆನ್ನಮಲ್ಲಿಕಾರ್ಜುನದೇವರ ಬೆರಸಿ ಮತಿಗೆಟ್ಟವಳನೇತಕ್ಕೆ ನುಡಿಸುವಿರಯ್ಯಾ?