ವಚನ - 189     
 
ಗಿರಿಯಲಲ್ಲದೆ ಹುಲ್ಲುಮೊರಡಿಯಲ್ಲಾಡುವುದೆ ನವಿಲು? ಕೊಳಕ್ಕಲ್ಲದೆ ಕಿರುವಳ್ಳಕ್ಕೆಳಸುವುದೆ ಹಂಸೆ? ಮಾಮರ ತಳಿತಲ್ಲದೆ ಸರಗೈವುದೆ ಕೋಗಿಲೆ? ಪರಿಮಳವಿಲ್ಲದ ಪುಷ್ಪಕ್ಕೆಳಸುವುದೆ ಭ್ರಮರ? ಎನ್ನ ದೇವ ಚೆನ್ನಮಲ್ಲಿಕಾರ್ಜುನಂಗಲ್ಲದೆ ಅನ್ಯಕ್ಕೆಳಸುವುದೆ ಎನ್ನ ಮನ? ಪೇಳಿರೆ, ಕೆಳದಿಯರಿರಾ.