ವಚನ - 1586     
 
ಅಲ್ಲಯ್ಯಗಳ ವಚನ ಎರಡೆಂಬತ್ತು ಕೋಟಿ. ಅಪ್ಪಯ್ಯಗಳ ವಚನ ನಾಲ್ಕು ಲಕ್ಷದ ಮೂವತ್ತಾರು ಸಾಸಿರ. ಎಮ್ಮಯ್ಯಗಳ ವಚನ ವಚನಕ್ಕೊಂದು. ನೀಲಮ್ಮನ ವಚನ ಲಕ್ಷದ ಹನ್ನೊಂದು ಸಾಸಿರ. ಗಂಗಾಂಬಿಕೆಯ ವಚನ ಲಕ್ಷದ ಎಂಟು ಸಾಸಿರ. ಎಮ್ಮಕ್ಕ ನಾಗಾಯಿಯ ವಚನ ಮೂರುಲಕ್ಷದ ತೊಂಬತ್ತಾರು ಸಾಸಿರ. ಮಡಿವಾಳಣ್ಣನ ವಚನ ಮೂರು ಕೋಟಿಮುನ್ನೂರು. ಹಡಪದಯ್ಯಗಳ ವಚನ ಹನ್ನೊಂದು ಸಾಸಿರ. ಮರುಳಸಿದ್ಧನ ವಚನ ಅರುವತ್ತೆಂಟು ಸಾಸಿರ. ಇಂತಪ್ಪ ವಚನದ ರಚನೆಯ ಬಿಟ್ಟು, ಹುಡಿಮಣ್ಣ ಹೊಯ್ಯದೆ ಮಾಬನೆ, ಕುತ್ಸಿತ ಕಾವ್ಯಾಲಂಕಾರ ನೋಡುವರ ನೋಡಿ, ಮಹಾದೇವ ಕಪಿಲಸಿದ್ಧಮಲ್ಲಿಕಾರ್ಜುನ.