ವಚನ - 1607     
 
ಹಬ್ಬಗಳೆಲ್ಲ ಉಬ್ಬುಬ್ಬಿ ಲಿಂಗದ ಹಬ್ಬಕ್ಕೆ ಬಂದಬ್ಬರವ ನೋಡಾ! ಲಿಂಗದ ಹಬ್ಬ ನಿಮ್ಮ ಬಾಯಿಗೆ ಒಬ್ಬಿಯಲ್ಲದೆ ನಿಮ್ಮ ಜನನಕ್ಕೆ ಹಬ್ಬವೇನೊ, ಕಬ್ಬಿಲ ಮಬ್ಬುಳ್ಳ ಕೊಬ್ಬಿಗರಿರಾ, ಕಪಿಲಸಿದ್ಧಮಲ್ಲಿಕಾರ್ಜುನನೊಬ್ಬನರಿಯದಿರ್ದಡೆ?