Index   ವಚನ - 201    Search  
 
ಚಕ್ರ ಬೆಸಗೆಯ್ವಡೆ ಅಲಗಿನ ಹಂಗೇಕೆ? ಮಾಣಿಕ್ಯದ ಬೆಳಗುಳ್ಳಡೆ ದೀಪದ ಹಂಗೇಕೆ? ಪರುಷ ಕೈಯ್ಯಲುಳ್ಳಡೆ ಸಿರಿಯ ಹಂಗೇಕೆ? ಕಾಮಧೇನು ಕರೆವಡೆ ಕರುವಿನ ಹಂಗೇಕೆ? ಎನ್ನದೇವ ಚೆನ್ನಮಲ್ಲಿಕಾರ್ಜುನಲಿಂಗವು ಕರಸ್ಥಳದೊಳಗುಳ್ಳಡೆ ಇನ್ನಾವ ಹಂಗೇಕೆ?