Index   ವಚನ - 208    Search  
 
ಜಾಲಗಾರನೊಬ್ಬ ಜಲವ ಹೊಕ್ಕು ಶೋಧಿಸಿ, ಹಲವು ಪ್ರಾಣಿಯ ಕೊಂದು, ನಲಿನಲಿದಾಡುವ. ತನ್ನ ಮನೆಯಲೊಂದು ಶಿಶು ಸತ್ತಡೆ. ಅದಕ್ಕೆ ಮರುಗುವಂತೆ ಅವಕೇಕೆ ಮರುಗ? ಅದೆಂತೆಂದಡೆ: ಸ್ವಾತ್ಮಾನಮಿತರಂ ಚೇತಿ ಭಿನ್ನತಾ ನೈವ ದೃಶ್ಯತಾಂ | ಸರ್ವಂ ಚಿಜ್ಜ್ಯೋತಿರೇವೇತಿ ಯಃ ಪಶ್ಯತಿ ಸ ಪಶ್ಯತಿ'' || ಎಂದುದಾಗಿ, ಜಾಲಗಾರನ ದುಃಖ ಜಗಕೆಲ್ಲ ನಗೆಗೆಡೆ. ಇದು ಕಾರಣ, ಚೆನ್ನಮಲ್ಲಿಕಾರ್ಜುನಯ್ಯನ ಭಕ್ತನಾಗಿರ್ದು ಜೀವಹಿಂಸೆ ಮಾಡುವ ಮಾದಿಗರನೇನೆಂಬೆನಯ್ಯಾ?