ವಚನ - 1842     
 
ಆರಿಗೆ ನಿಲುಕದ ಬ್ರಹ್ಮವ, ನೀನಾರಿಸಿ ನೋಡಿದಡೆ ಹುರುಳಿಲ್ಲ ನೋಡಾ, ಮರುಳು ಮಾನವಾ. ಆರಿಗೆಂಬಲ್ಲಿ ಜೀವಭಾವ ಆರಿಸಿದೆನೆಂಬಲ್ಲಿ ಅಹಂಭಾವ. ಆರಿಗೆಂಬುದು, ಆರಿಸಿದೆನೆಂಬುದು ಅಳಿದಡೆ, ಅದೇ ಪರಬ್ರಹ್ಮ ನೋಡಾ, ಕಪಿಲಸಿದ್ಧಮಲ್ಲಿಕಾರ್ಜುನಾ.