ವಚನ - 1846     
 
ಅಯ್ಯಗಳು ರುದ್ರಾಕ್ಷಿಯ ಕೊಟ್ಟಲ್ಲಿ ಫಲವಲ್ಲದೆ, ಸುಮ್ಮನೆ ಧರಿಸಿದಲ್ಲಿ ಫಲವಿಲ್ಲ ನೋಡಾ, ಭಕ್ತನು ಪದಾರ್ಥ ನೀಡಿದಲ್ಲಿ ಫಲವಲ್ಲದೆ, ಬೇಡಿ ರುಚಿಸಿದಲ್ಲಿ ಫಲವಿಲ್ಲ ನೋಡಾ. ನಿನ್ನರಿವ ನಾನರಿತಲ್ಲಿ ಫಲವಲ್ಲದೆ, ಅರುಹಿಸಿದಲ್ಲಿ ಫಲವಿಲ್ಲ. ಅಹುದೆಂಬುದು ನೀತಿ, ಬಲ್ಲೆ ನೋಡಾ, ಕಪಿಲಸಿದ್ಧಮಲ್ಲಿಕಾರ್ಜುನಾ.