Index   ವಚನ - 224    Search  
 
ತನ್ನವಸರಕ್ಕಾಗಿ ಹಗಲುಗನ್ನವನಿಕ್ಕಿದಡೆ, ಕನ್ನ ಸವೆಯಲಿಲ್ಲ, ಕಳವು ದೊರೆಯಲಿಲ್ಲ! ಬೊಬ್ಬುಲಿಯನೇರಿದ ಮರ್ಕಟನಂತೆ ಹಣ್ಣ ಮೆಲ್ಲಲಿಲ್ಲ, ಕುಳ್ಳಿರೆ ಠಾವಿಲ್ಲ. ನಾನು ಸರ್ವಸಂಗಪರಿತ್ಯಾಗಮಾಡಿದವಳಲ್ಲ, ನಿಮ್ಮ ಕೂಡಿ ಕುಲವಳಿದವಳಲ್ಲ, ಚೆನ್ನಮಲ್ಲಿಕಾರ್ಜುನಾ.