ವಚನ - 1865     
 
ಸರ್ವರು ಲಿಂಗವಂತರೆಂದು ಮನದಲ್ಲಿ ಭಾವಿಸಿ ನಡೆಯಬೇಕಲ್ಲದೆ, ನಡೆನುಡಿಯಲ್ಲಿ ಭಾವಿಸಿ ನಡೆಯಬಾರದು ನೋಡಯ್ಯಾ. ಸರ್ವರು ಲಿಂಗವಂತರೆಂದು ಭಾವಿಸಿದಲ್ಲಿ ಪೂರೈಸಿಕೊಳ್ಳಬೇಕಲ್ಲದೆ, ಪುರಹರ ಕಪಿಲಸಿದ್ಧಮಲ್ಲಿಕಾರ್ಜುನನ ಮಂದಿರವಾಸಿಗಳೆಂದು ಭಾವಿಸಬಾರದು ನೋಡಯ್ಯಾ.