ವಚನ - 227     
 
ತಲೆಯಲ್ಲಿ ನಿರಿ, ಟೊಂಕದಲ್ಲಿ ಮುಡಿ, ಮೊಳಕಾಲಲ್ಲಿ ಕಿವಿಯೋಲೆಯ ಕಂಡೆ. ಹರವಸದ ಉಡಿಗೆ! ಏಕಾಂತದಲ್ಲಿ ಮುಖವ ಕಂಡು ಕಾಣದೆ ಚೆನ್ನಮಲ್ಲಿಕಾರ್ಜುನನ ನೆರೆವ ಪರಿಕರ ಹೊಸತು?