ಬಯಲು ಮೂರ್ತಿಯಾಗಿ ನಿಂದನೊಬ್ಬ ಶರಣ.
ಆತನ ವಿದ್ಯಾ-ಬುದ್ಧಿಯಿಂದ ಹುಟ್ಟಿದಾತ ಬ್ರಹ್ಮ,
ಆತನ ಶಾಂತಿ-ಸೈರಣೆಯಿಂದ ಹುಟ್ಟಿದಾತ ವಿಷ್ಣು,
ಆತನ ಕೋಪ-ಕ್ರೋಧದಿಂದ ಹುಟ್ಟಿದಾತ ರುದ್ರ,
ಈ ಮೂವರ ಪೀಠವಂತಿರಲಿ,
ಈ ತತ್ತ್ವತ್ರಯಂಗಳಿಗೆ ತಾನೆ ಕಾರಣವಾಗಿಪ್ಪ
ಆ ಶರಣನನ ನಿಲವನರಿದು ಶರಣೆನುತ್ತಿದ್ದೆನು, ಕೂಡಲಚೆನ್ನಸಂಗಮದೇವಾ.