Index   ವಚನ - 9    Search  
 
ನಿರಾಲಂಬದಲ್ಲಿ ನಿಜಲಿಂಗ (ತಾ)ನೆಂಬ ಮಹದಹಂಕಾರವೆ ಸಂಸಾರಿಯಾಗಿ ಬಂದು ಬಳಲುವ ಭ್ರಾಂತು ಇನ್ನಾರಿಗೆಯೂ ತಿಳಿಯದಯ್ಯಾ. ಇನ್ನಾರು ಪರಿಹರಿಸುವರಯ್ಯಾ ಬಸವಣ್ಣನಲ್ಲದೆ? ಇದು ಕಾರಣ, ಬಸವಣ್ಣನ ಶ್ರೀಪಾದವ ತೋರಿ ಬದುಕಿಸಾ ಕೂಡಲಚೆನ್ನಸಂಗಮದೇವಾ.