Index   ವಚನ - 14    Search  
 
ಬಸವಣ್ಣಾ ಓಂಕಾರದಿಂದತ್ತತ್ತ ನೀನೆ, ಬಸವಣ್ಣಾ ನಾದಬಿಂದುಕಳೆಗಳಿಂದತ್ತತ್ತ ನೀನೆ, ಬಸವಣ್ಣಾ ಪ್ರಥಮಾಚಾರ್ಯ ನೀನೆ, ಬಸವಣ್ಣಾ ಲಿಂಗಾಚಾರ್ಯ ನೀನೆ, ಬಸವಣ್ಣಾ ಜಂಗಮಾಚಾರ್ಯ ನೀನೆ, ಬಸವಣ್ಣಾ ಪ್ರಸಾದಾಚಾರ್ಯ ನೀನೆ, ಬಸವಣ್ಣಾ ಎನಗೆ ಸರ್ವಾಚಾರ್ಯ ನೀನೆ. ನೀನೇ ಗತಿಮತಿಯಾಗಿ ಎನ್ನನುಳುಹಿದ ಕಾರಣ ಕೂಡಲಚೆನ್ನಸಂಗಮದೇವಾ ಆವ ವರ್ಣವಿಲ್ಲದಂದು `ಓಂ ನಮಃ ಶಿವಾಯ' ಎನುತಿರ್ದೆನು.