Index   ವಚನ - 18    Search  
 
ಅಸ್ತಿ ಭಾತಿಯೆಂಬ ಎನ್ನ ಸತ್ಯದಲ್ಲಿ, ನಾಮ ರೂಪೆಂಬ ಹುಸಿಯೆಂತು ಜನಿಸಿತೆಂದರಿಯೆನಯ್ಯಾ! ಇಲ್ಲದ ಹೆಸರುಳ್ಳ ಭಿತ್ತಿಯ ಚಿತ್ತಾರದಂತೆ, ದೇಹ ನಾಮವೀತೆರನೆಂದರಿಯದೆ ತೊಳಲಿ ಬಳಲುತ್ತಿದ್ದೆನಯ್ಯಾ, ಕೂಡಲಚೆನ್ನಸಂಗಯ್ಯಾ, ಸಂಸಾರಬಂಧನಯೆನಗಿದೇ ಕಂಡಯ್ಯಾ.