Index   ವಚನ - 50    Search  
 
ಪಾತಾಳದಗ್ಘವಣಿಯ ನೇಣಿಲ್ಲದೆ ತೆಗೆಯಬಹುದೆ, ಸೋಪಾನದ ಬಲದಿಂದಲ್ಲದೆ? ಶಬ್ದಸೋಪಾನವ ಕಟ್ಟಿ ನಡೆಯಿಸಿದರು ನಮ್ಮ ಪುರಾತನರು, ಪಾತಾಳದಗ್ಘವಣಿಯ ನೇಣಿಲ್ಲದೆ ತೆಗೆಯಬಹುದೆ ಸೋಪಾನದ ಬಲದಿಂದಲ್ಲದೆ? ಶಬ್ದಸೋಪಾನದ ಬಲದಿಂದ ನಿಃಶಬ್ದ ಸೋಪಾನವ ಕಟ್ಟಿ ನಡೆಯಿಸಿದರು ನಮ್ಮ ಪುರಾತನರು ದೇವಲೋಕಕ್ಕೆ ಬಟ್ಟೆ ಕಾಣಿರೋ. ಮರ್ತ್ಯರ ಮನದ ಮೈಲಿಗೆಯ ಕಳೆಯಲೆಂದು ಗೀತಮಾತೆಂಬ ಜ್ಯೋತಿಯ ಬೆಳಗಿ ಕೊಟ್ಟರು, ಕೂಡಲಚೆನ್ನಸಂಗನ ಶರಣರು.