ವಚನ - 241     
 
ನಚ್ಚುಗೆ ಮನ ನಿಮ್ಮಲ್ಲಿ, ಮಚ್ಚುಗೆ ಮನ ನಿಮ್ಮಲ್ಲಿ, ಸಲುಗುಗೆ ಮನ ನಿಮ್ಮಲ್ಲಿ, ಸೋಲುಗೆ ಮನ ನಿಮ್ಮಲ್ಲಿ, ಅಳಲುಗೆ ಮನ ನಿಮ್ಮಲ್ಲಿ, ಬಳಲುಗೆ ಮನ ನಿಮ್ಮಲ್ಲಿ, ಕರಗುಗೆ ಮನ ನಿಮ್ಮಲ್ಲಿ, ಕೊರಗುಗೆ ಮನ ನಿಮ್ಮಲ್ಲಿ. ಎನ್ನ ಪಂಚೇಂದ್ರಿಯಂಗಳು ಕಬ್ಬುನ ಉಂಡ ನೀರಿನಂತೆನಿಮ್ಮಲ್ಲಿ ಬೆರಸುಗೆ ಚೆನ್ನಮಲ್ಲಿಕಾರ್ಜುನಯ್ಯಾ.