Index   ವಚನ - 65    Search  
 
ಭಕ್ತ ಶಾಂತನಾಗಿರಬೇಕು, ತನ್ನ ಕುರಿತು ಬಂದ ಠಾವಿನಲ್ಲಿ ಸತ್ಯನಾಗಿರಬೇಕು, ಭೂತಹಿತವಹ ವಚನವ ನುಡಿಯಬೇಕು, ಗುರುಲಿಂಗ ಜಂಗಮದಲ್ಲಿ ನಿಂದೆಯಿಲ್ಲದಿರಬೇಕು ಸಕಲ ಪ್ರಾಣಿಗಳ ತನ್ನಂತೆ ಭಾವಿಸೂದು ಮಾಡಬೇಕು, ತನುಮನಧನವ ಗುರುಲಿಂಗ ಜಂಗಮಕ್ಕೆ ಸವೆಸಲೇಬೇಕು, ಅಪಾತ್ರದಾನವ ಮಾಡಲಾಗದು, ಸಕಲೇಂದ್ರಿಯಗಳ ತನ್ನ ವಶವ ಮಾಡಬೇಕು, ಇದೇ ಮೊದಲಲ್ಲಿ ಬೇಹ ಶೌಚ ನೋಡಾ. ಲಿಂಗವ ಪೂಜಿಸಿ ಪ್ರಸಾದವ ಪಡೆವಡೆ ಎನಗಿದೇ ಸಾಧನ ಕೂಡಲಚೆನ್ನಸಂಗಮದೇವಾ.