ವಚನ - 242     
 
ನಡೆಯದ ನುಡಿಗಡಣ, ಮಾಡದ ಕಲಿತನ, ಚಿತ್ರದಸತಿಯ ಶೃಂಗಾರವದೇತಕ್ಕೆ ಪ್ರಯೋಜನ? ಎಲೆಯಿಲ್ಲದ ಮರನು, ಜಲವಿಲ್ಲದ ನದಿಯು, ಗುಣಿಯಲ್ಲದ ಅವಗುಣಿಯ ಸಂಗವದೇತಕ್ಕೆ ಪ್ರಯೋಜನ? ದಯವಿಲ್ಲದ ಧರ್ಮ, ಉಭಯವಿಲ್ಲದ ಭಕ್ತಿಯು, ನಯವಿಲ್ಲದ ಶಬ್ದವದೇತಕ್ಕೆ ಪ್ರಯೋಜನ ಎನ್ನ ದೇವ ಚೆನ್ನಮಲ್ಲಿಕಾರ್ಜುನಾ?