Index   ವಚನ - 78    Search  
 
ಅಂಗದ ಮೇಲೆ ಲಿಂಗಸಾಹಿತ್ಯವಾದ ಬಳಿಕ ಕ್ಷೇತ್ರತೀರ್ಥಕ್ಕೆ ಹೋಗಲೇಕಯ್ಯ! ಅನ್ಯ ಲಿಂಗವ ಮುಟ್ಟಿ ದರ್ಶನ ಮಾಡುವ ಕುನ್ನಿಗಳನೇನೆಂಬೆನಯ್ಯಾ. ಅಂಗದ ಮೇಲಣ ಲಿಂಗ [ರಂಗದ] ಕಲ್ಲ ತಾಗಿದರೆ ಆವುದ ಘನವೆಂಬೆನಾವುದ ಕಿರಿದೆಂಬೆ! ತಾಳ ಸಂಪುಟಕ್ಕೆ ಬಾರದ ಘನವನರಿಯದೆ ಕೆಟ್ಟರು. ಜಂಗಮದರ್ಶನ ಶಿರಮುಟ್ಟಿ ಪಾವನ, ಲಿಂಗದರ್ಶನ ಕರಮುಟ್ಟಿ ಪಾವನ. ಹತ್ತರಿದ್ದ ಲಿಂಗವ ಹುಸಿಮಾಡಿ, ದೂರಲಿದ್ದ ಲಿಂಗಕ್ಕೆ ನಮಸ್ಕರಿಸುವ ವ್ರತಗೇಡಿಯ ತೋರದಿರಯ್ಯಾ! ಕೂಡಲಚೆನ್ನಸಂಗಯ್ಯಾ.