Index   ವಚನ - 248    Search  
 
ನಾನು ನಿನಗೊಲಿದೆ, ನೀನು ಎನಗೊಲಿದೆ. ನೀನೆನ್ನನಗಲದಿಪ್ಪೆ, ನಾನಿನ್ನ ನಗಲದಿಪ್ಪೆನಯ್ಯಾ. ನಿನಗೆ ಎನಗೆ ಬೇರೊಂದು ಠಾವುಂಟೆ? ನೀನು ಕರುಣಿಯೆಂಬುದ ಬಲ್ಲೆನು; ನೀನಿರಿಸಿದ ಗತಿಯೊಳಗಿಪ್ಪವಳಾನು. ನೀನೆ ಬಲ್ಲೆ ಚೆನ್ನಮಲ್ಲಿಕಾರ್ಜುನಾ.