Index   ವಚನ - 132    Search  
 
ಶಿಲೆಯೆಂಬ ಪೂರ್ವಾಶ್ರಯವ ಕಳೆದು ಲಿಂಗವೆಂದ, ನರನೆಂಬ ಪೂರ್ವಾಶ್ರಯವ ಕಳೆದು ಗುರುವೆಂದ, ಜಾತಿಸೂತಕದ ಪೂರ್ವಾಶ್ರಯವ ಕಳೆದು ಜಂಗಮವೆಂದ, ಎಂಜಲೆಂಬ ಪೂರ್ವಾಶ್ರಯವ ಕಳೆದು ಪ್ರಸಾದವೆಂದ. ಇಂತೀ ಚತುರ್ವಿಧ ಪೂರ್ವಾಶ್ರಯವ ಕಳೆಯಬಲ್ಲನಾಗಿ ಕೂಡಲಚೆನ್ನಸಂಗಯ್ಯನಲ್ಲಿ ಶರಣ ಸ್ವತಂತ್ರನು.