Index   ವಚನ - 172    Search  
 
ಶ್ರೀಗುರುಕರುಣಕಟಾಕ್ಷದಲ್ಲಿ ಉತ್ಪತ್ಯವಾದ ಅಜಾತಂಗೆ ಜಾತಿಸೂತಕ, ಜನನಸೂತಕ, ಪ್ರೇತಸೂತಕ, ರಜಸ್ಸೂತಕವುಂಟೆಂಬವಂಗೆ ಗುರುವಿಲ್ಲ, ಲಿಂಗವಿಲ್ಲ, ಜಂಗಮವಿಲ್ಲ, ಪ್ರಸಾದವಿಲ್ಲವಯ್ಯಾ ಕೂಡಲಚೆನ್ನಸಂಗಯ್ಯಾ.