Index   ವಚನ - 173    Search  
 
ಅಂಗದ ಮೇಲೆ ಲಿಂಗಧಾರಣವಾದ ಬಳಿಕ ಮರಳಿ ಭವಿ ನಂಟನೆಂದು ಬೆರಸಿದರೆ ಕೊಂಡ ಮಾರಿಂಗೆ ಹೋಹದು ತಪ್ಪದು. ಹಸಿಯ ಮಣ್ಣಿನಲ್ಲಿ ಮಾಡಿದ ಮಡಕೆ ಅಗ್ನಿಮುಖದಿಂದಾದ ಬಳಿಕ ಅದು ತನ್ನ ಪೂರ್ವಕುಲವ ಬೆರಸೂದೆ? "ಅಗ್ನಿದಗ್ಧಘಟಃ ಪ್ರಾಹುರ್ನ ಭೂಯೋ ಮೃತ್ತಿಕಾಯತೇ| ತಚ್ಛಿವಾಚಾರಸಂಗೇನ ನ ಪುನರ್ಮಾನುಷೋ ಭವೇತ್"|| ಇದು ಕಾರಣ, ಪೂರ್ವ ನಾಸ್ತಿಯಾದ ಭಕ್ತನಪೂರ್ವ, ಕೂಡಲಚೆನ್ನಸಂಗಮದೇವಾ.