Index   ವಚನ - 175    Search  
 
ಅಂಗಾಶ್ರಯವಳಿದು ಲಿಂಗಾಶ್ರಯವಾದ ಬಳಿಕ ಅಂಗಕ್ಕೆ ಲಿಂಗಾಚಾರವಲ್ಲದೆ ಅಂಗಕ್ರೀಯೆಂಬುದನರಿದಂಗವಿಸರು ನೋಡಾ! ಲಿಂಗದಲ್ಲಿ ನಿಷ್ಠೆವಂತರಾದ ಬಳಿಕ ಅನ್ಯನಾಮವಿಡಿದು ಬಳಲುವ ಬಳಲಿಕೆ ಇನ್ನೆಲ್ಲಿಯದೋ, ಇದು ಕಾರಣ ಕೂಡಲಚೆನ್ನಸಂಗನ ಶರಣರು ಅನ್ಯವನಾಚರಿಸುವರಲ್ಲ.