Index   ವಚನ - 180    Search  
 
ಶೀಲ ಶೀಲವೆಂದು ಗರ್ವಿಸಿ ನುಡಿವುತಿಪ್ಪರು, ಶೀಲವಾವುದೆಂದರಿಯರು. ಇದ್ದುದ ವಂಚನೆಯ ಮಾಡಿದಿಪ್ಪುದೆ ಶೀಲ, ಇಲ್ಲದಿದ್ದುದಕ್ಕೆ ಕಡನ ಬೇಡದಿಪ್ಪುದೆ ಶೀಲ, ಪರಧನ ಪರಸತಿಗೆಳಸದಿಪ್ಪುದೆ ಶೀಲ, ಪರದೈವ ಪರಸಮಯಕ್ಕೆಳಸದಿಪ್ಪುದೆ ಶೀಲ, ಗುರುನಿಂದೆ ಜಂಗಮನಿಂದೆಯ ಕೇಳದಿಪ್ಪುದೆ ಶೀಲ, ಕೂಡಲಚೆನ್ನಸಂಗನ ಶರಣರ ಬರವಿಂಗೆ ಮುಯ್ಯಾಂತು ಪರಿಣಾಮಿಸ ಬಲ್ಲರೆ ಅಚ್ಚಶೀಲ.