Index   ವಚನ - 184    Search  
 
ಗುರುವಿನಲ್ಲಿ ಸದಾಚಾರಿ, ಲಿಂಗದಲ್ಲಿ ಶಿವಾಚಾರಿ, ಜಂಗಮದಲ್ಲಿ ಸಮಯಾಚಾರಿ. ಪ್ರಸಾದದಲ್ಲಿ ಬ್ರಹ್ಮಾಚಾರಿ, ಆಚಾರದಲ್ಲಿ ವಿಚಾರಿ ಕೂಡಲಚೆನ್ನಸಂಗಾ ನಿಮ್ಮ ಶರಣ. ಇಂತೀ ತ್ರಿವಿಧಾಚಾರ ಸಂಬಂಧವಾದ ಬಳಿಕ ತನ್ನ ಶೀಲಕ್ಕೆ ಸಮಶೀಲವಾಗದವರ ಮನೆಯಲನುಸರಿಸಿ ನಡೆದಡೆ ಕೂಡಲಚೆನ್ನಸಂಗನ ಶರಣ, ಪೂರ್ವಾಚಾರ್ಯ ಸಂಗನಬಸವಣ್ಣ ಮೆಚ್ಚ ಕಾಣಿರಣ್ಣಾ.