Index   ವಚನ - 213    Search  
 
ಲಿಂಗಕ್ಕೆ ಗಿಣ್ಣಿಲ ಓಗರ, ಭಕ್ತಂಗೆ ತಳಿಗೆ ತುಂಬಿದ ಓಗರ, ಆನಿನ್ನೇವೆನಯ್ಯಾ! ಲಿಂಗವ ಕಿರಿದು ಮಾಡಿ, ಅಂಗವ ಹಿರಿದು ಮಾ[ಡೆ], ನಾನಿನ್ನೇವೆನಯ್ಯಾ! ಲಿಂಗಕ್ಕೆ ಬಾರದ ರುಚಿ ಕೃತಕಿಲ್ಬಿಷ, ಆನಿನ್ನೇವೆನಯ್ಯಾ! ಲಿಂಗಕ್ಕೆ ಬಾರದ ಭೋಗವ ಭೋಗಿಪರ ತೋರದಿರಯ್ಯಾ, ಕೂಡಲಚೆನ್ನಸಂಗಮದೇವಾ.