Index   ವಚನ - 247    Search  
 
ಪ್ರಸಾದ ಪ್ರಸಾದವೆಂದು ಹೆಸರಿಟ್ಟುಕೊಂಡುಂಬಿರಿ, ಪ್ರಸಾದವಾವುದು? ಓಗರವಾವುದು? ಬಲ್ಲವರು ನೀವು ಹೇಳಿರೇ. ಕೈಯಲಿಕ್ಕಿದವ ಶಿವದ್ರೋಹಿ, ಕೈಯಾಂತು ಕೊಂಡವ ಗುರುದ್ರೋಹಿ, ಕಾಯವ ಕಳೆದು ಕಾಯಪ್ರಸಾದಿ, ಜೀವವ ಕಳೆದು ಜೀವಪ್ರಸಾದಿ, ಪ್ರಾಣವ ಕಳೆದು ಪ್ರಾಣಪ್ರಸಾದಿ. ಕಾಯ ಜೀವ ಇಂದ್ರಿಯ ವಿರೋದಿಗಲ್ಲದೆ ಮತ್ತಾರಿಗೂ ಆಗದು. ಕೂಡಲಚೆನ್ನಸಂಗಯ್ಯನಲ್ಲಿ ಬಸವಣ್ಣಂಗಲ್ಲದೆ ಮತ್ತಾರಿಗೂ ಆಗದು.