Index   ವಚನ - 262    Search  
 
ನೀರಕ್ಷೀರದಂತೆ ನೀನಿಪ್ಪೆಯಾಗಿ, ಆವುದು ಮುಂದು, ಆವುದು ಹಿಂದು ಎಂದರಿಯೆ. ಆವುದು ಕರ್ತೃ, ಆವುದು ಭೃತ್ಯನೆಂದರಿಯೆ. ಆವುದು ಘನ, ಆವುದು ಕಿರಿದೆಂದರಿಯೆ. ಚೆನ್ನಮಲ್ಲಿಕಾರ್ಜುನಯ್ಯಾ, ನೀನೊಲಿದು ಕೊಂಡಾಡಿದಡೆ ಇರುಹೆ ರುದ್ರನಾಗದೆ ಹೇಳಯ್ಯಾ?