Index   ವಚನ - 289    Search  
 
ಹೊಲೆಯುಂಟೆ ಲಿಂಗವಿದ್ದೆಡೆಯಲ್ಲಿ? ಕುಲವುಂಟೆ ಜಂಗಮವಿದ್ದೆಡೆಯಲ್ಲಿ? ಎಂಜಲುಂಟೆ ಪ್ರಸಾದವಿದ್ದೆಡೆಯಲ್ಲಿ? ಅಪವಿತ್ರದ ನುಡಿಯ ನುಡಿವ ಸೂತಕವೆ ಪಾತಕ, ನಿಷ್ಕಳ ನಿಜೈಕ್ಯ ತ್ರಿವಿಧನಿರ್ಣಯ ಕೂಡಲ ಚೆನ್ನಸಂಗಾ ನಿಮ್ಮ ಶರಣನು.