Index   ವಚನ - 300    Search  
 
ದ್ರವ್ಯರೂಪ ರೂಪಿಸುವೆ ಅರ್ಪಿತಕ್ಕೆಂದು ಅರ್ಪಿತರೂಪ ರೂಪಿಸುವೆ ಪ್ರಸಾದಕ್ಕೆಂದು, ಪ್ರಸಾದರೂಪ ರೂಪಿಸುವೆ ಕಾಯಕ್ಕೆಂದು, "ಪ್ರಥಮೇ ಯೋಜಯೇದ್ದ್ರವ್ಯಂ ದ್ವಿತೀಯಂ ಅರ್ಪಿತಂ ತಥಾ| ತದರ್ಥಂ ತು ಶರೀರಾರ್ಥಂ ಶರೀರಂ ಪ್ರಾಣಕಾರಣಂ"|| ಎಂದುದಾಗಿ ಕಾಯರೂಪ ರೂಪಿಸುವೆ ಪ್ರಾಣಕ್ಕೆಂದು ಪ್ರಾಣರೂಪ ರೂಪಿಸುವೆ ಕೂಡಲಚೆನ್ನಸಂಗಯ್ಯಗೆಂದು.