Index   ವಚನ - 415    Search  
 
ಶೀಲ ಶೀಲವೆಂದೇನೋ? ಮಾಡಿದ ಮನೆ, ಹೂಡಿದ ಒಲೆ, ಅಟ್ಟುಂಬ ಮಡಕೆ, ಕಟ್ಟಿದ ಕೆರೆ, ಬಿತ್ತಿದ ಕೆಯಿ ಶೀಲವಲ್ಲದೆ ತನ್ನ ಮನಕ್ಕೆ ಶೀಲವಿಲ್ಲ. ಶೀಲವೆಂತೆಂದರೆ: ಲಿಂಗವು ಬಂದು ಮನವನಿಂಬುಗೊಂಬುದೇ ಶೀಲ. ಜಂಗಮ ಬಂದು ಧನವನಿಂಬುಗೊಂಬುದೇ ಶೀಲ. ಪ್ರಸಾದ ಬಂದು ತನುವನಿಂಬುಗೊಂಬುದೇ ಶೀಲ. ಇಂತಪ್ಪ ಶೀಲಕ್ಕೆ ನಮೋ ನಮೋ. ಉಳಿದ ದುಃಶೀಲರ ಕಂಡರೆ ಮೆಚ್ಚುವನೆ ನಮ್ಮ ಕೂಡಲಚೆನ್ನಸಂಗಯ್ಯ?