Index   ವಚನ - 417    Search  
 
ನಿಷ್ಠೆಯುಳ್ಳಾತಂಗೆ ನಿತ್ಯನೇಮದ ಹಂಗೇಕೆ? ಸತ್ಯವುಳ್ಳಾತಂಗೆ ತತ್ತ್ವವಿಚಾರದ ಹಂಗೇಕೆ? ಅರಿವುಳ್ಳಾತಂಗೆ ಅಗ್ಘವಣಿಯ ಹಂಗೇಕೆ? ಮನಶುದ್ಧವುಳ್ಳವಂಗೆ ಮಂತ್ರದ ಹಂಗೇಕೆ? ಭಾವ ಶುದ್ಧವುಳ್ಳವಂಗೆ ಹೂವಿನ ಹಂಗೇಕೆ? ಕೂಡಲಚೆನ್ನಸಂಗಯ್ಯಾ, ನಿಮ್ಮನರಿದಾತಂಗೆ ನಿಮ್ಮ ಹಂಗೇಕೆ?