Index   ವಚನ - 439    Search  
 
ಕಾಯದ ಕೈಯಲು ಲಿಂಗಾರ್ಪಿತ ಖಂಡಿತ ಭಾಷೆ. ಭಾವದ ಕೈಯಲು ಲಿಂಗಾರ್ಪಿತ ಖಂಡಿತ ಭಾಷೆ. ನೇತ್ರದ ಕೈಯಲು ಲಿಂಗಾರ್ಪಿತ ಖಂಡಿತ ಭಾಷೆ ಶ್ರೋತ್ರದ ಕೈಯಲು ಲಿಂಗಾರ್ಪಿತ ಖಂಡಿತ ಭಾಷೆ. ಘ್ರಾಣದ ಕೈಯಲು ಲಿಂಗಾರ್ಪಿತ ಖಂಡಿತ ಭಾಷೆ. ಜಿಹ್ವೆಯ ಕೈಯಲು ಲಿಂಗಾರ್ಪಿತ ಖಂಡಿತ ಭಾಷೆ. ಸ್ಪರ್ಶನದ ಕೈಯಲು ಲಿಂಗಾರ್ಪಿತ ಖಂಡಿತ ಭಾಷೆ. ಲಿಂಗಮಧ್ಯೇ ಶರಣ, ಶರಣಮಧ್ಯೇ ಲಿಂಗ. ಅಲ್ಲಲ್ಲಿ ತಾಗಿದ ಸುಖವೆಲ್ಲ ಲಿಂಗಾರ್ಪಿತವಾಗದಿದ್ದಡೆ ಕೂಡಲಚೆನ್ನಸಂಗಯ್ಯನಲ್ಲಿ ಅವರ ಸಹಜರೆಂತೆಂಬೆ?