Index   ವಚನ - 555    Search  
 
ತನು ನಾಗವತ್ತಿಗೆಯಾದಡೆ ಅರ್ಪಿತವ ಮಾಡಬೇಕು, ತನು ಸೆಜ್ಜೆಯಾದಡೆ ಅರ್ಪಿಸಲಿಲ್ಲ ಕಂಡಯ್ಯಾ. ತನು ಸಿಂಹಾಸನವಾದಡೆ ಸುಳಿವುದೆ ಭಂಗ. ಪ್ರಾಣಲಿಂಗ ಸಂಬಂಧಿಯಾದಡೆ, ಅದನು ಎರಡು ಮಾಡಿಕೊಂಡು ನುಡಿಯಲೇಕಯ್ಯಾ? ಒಂದೆಯೆಂದು ನುಡಿವ ಸೋಹದವನಲ್ಲ, ಬಹ ಪದಾರ್ಥದ ಲಾಭದವನಲ್ಲ, ಹೋಹ ಪದಾರ್ಥದ ಚೇಗೆಯವನಲ್ಲ, ಪ್ರಪಂಚವ ಹೊತ್ತುಕೊಂಬ ಭಾರದವ ತಾನಲ್ಲ. ಕೂಡಲಚೆನ್ನಸಂಗನ ಶರಣನುಪಮಾತೀತನು.