Index   ವಚನ - 291    Search  
 
ಬಸವಣ್ಣನ ಪಾದವ ಕಂಡೆನಾಗಿ ಎನ್ನಂಗ ನಾಸ್ತಿಯಾಯಿತ್ತು. ಚೆನ್ನಬಸವಣ್ಣನ ಪಾದವ ಕಂಡೆನಾಗಿ ಎನ್ನ ಪ್ರಾಣ ಬಯಲಾಯಿತ್ತು. ಪ್ರಭುವೆ, ನಿಮ್ಮ ಶ್ರೀಚರಣಕ್ಕೆ ಶರಣೆಂದೆನಾಗಿ ಎನ್ನ ಅರಿವು ಸ್ವಯವಾಯಿತ್ತು. ಚೆನ್ನಮಲ್ಲಿಕಾರ್ಜುನದೇವಯ್ಯಾ ನಿಮ್ಮ ಶರಣರ ಕರುಣವ ಪಡೆದೆನಾಗಿ ಎನಗೆ ಮತ್ತಾವುದಿಲ್ಲವಯ್ಯ ಪ್ರಭುವೆ.