Index   ವಚನ - 591    Search  
 
ಪರುಷದ ಪುತ್ಥಳಿಯ ಬಸುರಲ್ಲಿ ಅವಲೋಹ ಹುಟ್ಟುವುದೆ ಅಯ್ಯಾ? ಮರಳಿ ಮರಳಿ ಪರುಷ ಮುಟ್ಟಿ ಸುವರ್ಣವ ಹಡೆವರೆ, ಮುನ್ನ ಮುಟ್ಟಿತ್ತೆಲ್ಲಾ ಹುಸಿಯೇ? ಇದು ಕಾರಣ ಕೂಡಲಚೆನ್ನಸಂಗಯ್ಯ ಮೆಚ್ಚ, ಭವಿಯ ಕಳೆದು ಬೆರಸುವ ಸಂಬಂಧಿಗೆ ಸಂಗವಾದರೆ.