Index   ವಚನ - 605    Search  
 
ಶೀಲವಂತರು ಶೀಲವಂತರೆಂದೆಂಬರು ನಾವಿದನರಿಯೆವಯ್ಯ. ಅಂಗನೆಯರ ಅಧರಪಾನವು ತನ್ನ ಉದರವ ಹೊಗುವನ್ನಕ್ಕ ಶೀಲವೆಲ್ಲಿಯದೊ? ಈಷಣತ್ರಯವೆಂಬ ಸೊಣಗ ಬೆಂಬತ್ತಿ ಬರುತ್ತಿರಲು ಶೀಲವೆಲ್ಲಿಯದೊ? ಹೆರಸಾರಿ ಮನವು ಮಹದಲ್ಲಿ ನಿಂದರೆ ಶೀಲ, ಪರಿಣಾಮ ನೆಲೆಗೊಂಡರೆ ಶೀಲ. ಇದು ಕಾರಣ ಕೂಡಲಚೆನ್ನಸಂಗನಲ್ಲಿ ಶೀಲವಂತರಪೂರ್ವ.