ವಚನ - 296     
 
ಬಸವನ ಭಕ್ತಿ ಕೊಟ್ಟಣದ ಮನೆ. ಸಿರಿಯಾಳನ ಭಕ್ತಿ ಕಸಬುಗೇರಿ. ಸಿಂಧುಬಲ್ಲಾಳನ ಭಕ್ತಿ ಪರದಾರ ದ್ರೋಹ. ಉಳಿದಾದ ಅಟಮಟ ಉದಾಸೀನ ದಾಸೋಹವ ಮಾಡುವವರ ದೈನ್ಯವೆಂಬ ಭೂತ ಸೋಂಕಿತು. ಮಣ್ಣಿನ ಮನೆಯ ಕಟ್ಟಿ ಮಾಯಾ ಮೋಹಿನಿಯೆಂಬ ಮಹೇಂದ್ರ ಜಾಲದೊಳಗಾಗಿ ಮಾಡುವ ಮಾಟ. ಭಕ್ತನಲ್ಲಿ ಉಂಡು ಉದ್ದಂಡವೃತ್ತಿಯಲ್ಲಿ ನಡೆವವರು ಶಿವನಲ್ಲ. ಇವರು ದೇವಲೋಕ ಮತ್ರ್ಯಲೋಕಕ್ಕೆ ಹೊರಗು. ಶ್ರೀಗಿರಿ ಚೆನ್ನಮಲ್ಲಿಕಾರ್ಜುನಾ, ನನ್ನ ಭಕ್ತಿ ನಿನ್ನೊಳಗೈಕ್ಯವಾಯಿತ್ತಾಗಿ ನಿರ್ವಯಲಾದೆ ಕಾಣಾ.